ನೆಲ್ಯಾಡಿ: ಸರ್ವೋತ್ತಮ ಗೌಡ ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅ.10ರಂದು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಹಲವು ವರುಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು ಅಲ್ಲದೇ ಅವರು ಜಿ.ಪಂ. ಮತ್ತು ತಾ.ಪಂ. ಮಾಜಿ ಸದಸ್ಯರಾಗಿದ್ದರು.
ಕಡಬ ಬ್ಲಾಕ್ ಕಾಂಗ್ರೆಸ್ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮತ್ತು ಸ್ಥಳೀಯ ನಾಯಕರ ಮಾರ್ಗದರ್ಶನ, ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.