ಮಂಗಳೂರು ಮಂಗಳಾದೇವಿ ಉತ್ಸವದಲ್ಲಿ ವ್ಯಾಪಾರ ವಿಚಾರ; ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್

ಶೇರ್ ಮಾಡಿ

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ. ಹೌದು, ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದು, ಜೊತೆಗೆ ಮಂಗಳಾದೇವಿಯ ಹಿಂದೂಗಳ ಸ್ಟಾಲ್​ಗಳಿಗೆ ಭಗವಾನ್​ಧ್ಬಜ ಕಟ್ಟಿ, ಭಗವಾನ್​ಧ್ಬಜ ಇದ್ದ ಸ್ಟಾಲ್​ಗಳಲ್ಲೇ ವ್ಯಾಪಾರ ನಡೆಸಬೇಕು ಎಂದು ಕರೆ ಕೊಟ್ಟಿದ್ದ ಹಿನ್ನಲೆ ಶರಣ್ ಪಂಪ್ ವೆಲ್ ವಿರುದ್ದ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ.

ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ
ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್​ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್​ಧ್ಬಜ ಕಟ್ಟಿದ್ದರು. ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು ಮಾಡಿಕೊಂಡು,​ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇಂದು ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿದ್ದರು. ಸಚಿವ ದಿನೇಶ್ ಗುಂಡೂರಾವ್ ಎದುರು ಡಿವೈಎಫ್ಐ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು. ಆ ಬಳಿಕ‌ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ಗುಂಡೂರಾವ್ ಸೂಚಿಸಿದ್ದರು. ಇದರ ಬೆನ್ನಲ್ಲೇ ಶರಣ್ ಪಂಪ್ ವೆಲ್ ಸೇರಿ ಇನ್ನಿತರ ಕೆಲ ಮುಖಂಡರ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.

Leave a Reply

error: Content is protected !!