ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಶೇರ್ ಮಾಡಿ

ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದ್ದು, ಉಳಿದ ಶಾಸಕರಿಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಅಸಮಾಧಾನಗೊಂಡಿದ್ದು, ಕೊನೆಪಕ್ಷ ನಿಗಮ ಮಂಡಳಿ ಅಧ್ಯಕ್ಷರನ್ನಾಗಿಯಾದರೂ ಆಯ್ಕೆ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ.

ಹೀಗಾಗಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದರು.

ಸಭೆಯಲ್ಲಿ 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಉಭಯ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ನಿಮಗ ಮಂಡಳಿಗಳಿ ಅಧ್ಯಕ್ಷಗಿರಿ ಯಾರು ಯಾರಿಗೆ ಸಿಕ್ಕಿದೆ. ಇಲ್ಲಿದೆ ಓದಿ ಹೆಸರುಗಳು

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ನಿಗಮ ಮಂಡಳಿ ನೇಮಕ ಬಗ್ಗೆ ನಿನ್ನೆ ಒಂದು ಸುತ್ತು ಚರ್ಚೆ ಆಗಿದೆ ಎಂದರು. ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಎಂ, ನಾನು ಶುಕ್ರವಾರ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಕರ್ನಾಟಕಕ್ಕೆ ಬಂದಾಗ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಆಗುತ್ತೆ ಎಂದು ತಿಳಿಸಿದರು.

ಬಹಿರಂಗ ಹೇಳಿಕೆ ನೀಡಿದರೆ ಪಕ್ಷದಿಂದ ನೋಟಿಸ್ ನೀಡಲಾಗುತ್ತೆ
ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ. ಡಿ.ಕೆ.ಶಿವಕುಮಾರ್​ ಸಿಎಂ ಆಗುತ್ತಾರೆಂಬ ಕೆಲ ಶಾಸಕರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಇನ್ಮುಂದೆ ಪಕ್ಷದ ವಿಚಾರವಾಗಿ ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ವಿಚಾರ, ಅಧಿಕಾರದ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ಶಾಸಕರು ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ಅಧ್ಯಕ್ಷನಾಗಿ ಇದು ನನ್ನ ಕೊನೆಯ ಎಚ್ಚರಿಕೆ. ಮತ್ತೆ ಬಹಿರಂಗ ಹೇಳಿಕೆ ನೀಡಿದರೆ ಪಕ್ಷದಿಂದ ನೋಟಿಸ್ ನೀಡಲಾಗುತ್ತೆ. ಏನೇ ಸಮಸ್ಯೆ, ವಿಚಾರ ಇದ್ದರೂ ಪಕ್ಷ ನಾಯಕರ ಜೊತೆ ಚರ್ಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 25 ಶಾಸಕರ ಪಟ್ಟಿ ಸಿದ್ದಪಡಿಸಿಸಿದ್ದಾರೆ. ಹೈಕಮಾಂಡ್​ಗೆ ಪಟ್ಟಿ ಸಲ್ಲಿಸಿ ಮುಂದಿನ ವಾರಾಂತ್ಯದೊಳಗೆ ನೇಮಕಾತಿ ಮಾಡಲಾಗುವುದು.

ನಿಗಮ ಮಂಡಳಿಗೆ ನೇಮಕವಾಗುವ
ಬಸವರಾಜ ರಾಯರೆಡ್ಡಿ, ನರೇಂದ್ರಸ್ವಾಮಿ, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಬಂಗಾರಪೇಟೆ ನಾರಾಯಣಸ್ವಾಮಿ, ಕೋಲಾರ ನಂಜೇಗೌಡ, ಬಿ.ಕೆ.ಸಂಗಮೇಶ್,ಬಿ.ಆರ್. ಪಾಟೀಲ್, ಎಂ.ವೈ.ಪಾಟೀಲ್, ಬಿ.ಜಿ ಗೋವಿಂದಪ್ಪ, ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ, ಎ.ಆರ್. ಕೃಷ್ಣಮೂರ್ತಿ, ಶಿವಲಿಂಗೇಗೌಡ, ರೂಪ ಶಶಿಧರ್, ರಾಜೇಗೌಡ, ರಘುಮೂರ್ತಿ, ಗಣೇಶ್ ಹುಕ್ಕೇರಿ, ಅನಿಲ್ ಚಿಕ್ಕಮಾದು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಕಗೊಳ್ಳುತ್ತಾರೆ.

Leave a Reply

error: Content is protected !!