
ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ.

ತುಮಕೂರುನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಉಮಾಶಂಕರ್, ನಿಖಿಲ್, ಜೀವಿತ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಿದ್ದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಪೊಲೀಸರಾದ ಪ್ರತಾಪ್ ರೆಡ್ಡಿ, ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

