ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.
ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರ ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.