ಚೈತ್ರಾ ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಶೇರ್ ಮಾಡಿ

ಚೈತ್ರಾ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಆಗಿದೆ. ಹೌದು, ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಇನ್ನು ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್​ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಿದ್ದ ಸಿಸಿಬಿ
ಹಾಲಾಶ್ರೀಗೆ ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಬಳಿಕ ಹಾಲಶ್ರೀ ಪರ ವಕೀಲರು, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

Leave a Reply

error: Content is protected !!