ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ತಿಳಿಸಿದ್ದಾರೆ.
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಸದ್ಯ ಅಪಘಾತದ ವಿಚಾರಕ್ಕೆ ಹತ್ಯೆಯಾಗಿದೆ ಎಂಬುದು ಸದ್ಯದ ತನಿಖೆಯಿಂದ ಹೊರ ಬಂದಿರುವ ಮಾಹಿತಿಯಾಗಿದ್ದು, ಹಳೇ ವೈಷಮ್ಯದಿಂದ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.
ಇನ್ನು ಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ ಆತನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗನ ಪರಿಚಯಸ್ಥರೇ ಆಗಿದ್ದರು. ಹತ್ಯೆಯ ಹಿಂದೆ ಬೇರೇ ಏನಾದರು ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.