ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸ್ಟೆಲ್ಗೆ ಹೊಂದಿಕೊಂಡಂತಿರುವ ಮನೆಯಲ್ಲಿ ವಾಸವಾಗಿದ್ದ ಸಲೀಂ ಎಂಬ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ಇನ್ನು ಬಾತ್ರೂಮ್ಗೆ ಹೋದ ವಿದ್ಯಾರ್ಥಿನಿಯರು, ಕ್ಯಾಮೆರಾ ಇಟ್ಟಿರುವುದನ್ನು ಕಂಡ ಕೂಡಲೇ ಹೊರಬಂದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯರು, ಗಲಾಟೆಯನ್ನು ಬಿಡಿಸಿ ಆರೋಪಿ ಎಸ್ಕೇಪ್ ಆಗಲು ಸಹಕರಿಸಿದ್ದರು.
ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ
ಆರೋಪಿ ತಪ್ಪಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ತಹಶೀಲ್ದಾರ್ ಮತ್ತು ಜೇವರ್ಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮನೆಯವರನ್ನು ವಿಚಾರಣೆ ನಡೆಸಿದ್ದು, ಆ ಬಳಿಕ ಮನೆಯವರು ಆರೋಪಿಯನ್ನು ಕರೆಸಿದ್ದಾರೆ. ಕ್ಯಾಮರಾ ಇಟ್ಟ ಕಾಮುಕನನ್ನ ಜೇವರ್ಗಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.