ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇಂದು ಬೆಳಗ್ಗೆಯಿಂದ ಹಲವೆಡೆ ತುಂತುರು ಮಳೆ ಆರಂಭವಾಗಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದೆ.
ಮುಂದಿನ ಐದು ದಿನಗಳ ಕಾಲ ಮೋಡ ಮಿಶ್ರಿತ ಹವಾಮಾನ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕಾಲಿಕ ಮಳೆಯಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.