ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ವತಿಯಿಂದ ಇಂದು ಕೌಕ್ರಾಡಿ ಸೇವಾ ಕೆಂದ್ರದಲ್ಲಿ ರೈತ ಕ್ಷೇತ್ರ ಪಾಠ ಶಾಲೆ, ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿ ಪಿ.ಕೆ ಚೆರಿಯನ್ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ನೋಡೆಲ್ ಅಧಿಕಾರಿ ಶ್ರೀರಾಮ್ ರವರು ವಿಶ್ವಕರ್ಮ ಯೋಜನೆಯ ಬಗ್ಗೆ, ಸೇವಾಕೆಂದ್ರದಲ್ಲಿ ನೀಡಲಾಗುವ ಸೇವೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಮಾರ್ಗದರ್ಶನ ನೀಡಿದರು. ತಾಲೂಕು ಕೃಷಿ ಅಧಿಕಾರಿ ಸೋಮೇಶ್, ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ತಾಲೂಕು ನೋಡೆಲ್ ಅಧಿಕಾರಿ ರಕ್ಷಕ್, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಮಾಹಿತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕೌಕ್ರಾಡಿ ಸೇವಾಕೆಂದ್ರದ ಅಶ್ವಿನಿ, ಮಾದೇರಿ ಸೇವಾಕೇಂದ್ರದ ಅಮೃತವಾಣಿ, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಹೇಮಾವತಿ.ಜೆ ಕಾರ್ಯಕ್ರಮ ನಿರೂಪಿಸಿ ನಮಿತಾ ಶೆಟ್ಟಿ ಸ್ವಾಗತಿಸಿದರು. ವೇದಾ.ಪಿ ವಂದಿಸಿದರು.