ಕೊಕ್ಕಡ:ಕರ್ನಾಟಕ ರಾಜ್ಯ ಸರಕಾರ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ಕೊಕ್ಕಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.17ರಂದು ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.
ಬಳಿಕ ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು. ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು, ತಾಲೂಕು ವಲಯ, ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು, ಸಹಶಿಕ್ಷರು, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಪದಾದಿಕಾರಿಗಳು, ಮೇಲ್ವಿಚಾರಕರು. ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗರವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿ ದೀಪಕ್ ರಾಜ್ ಅವರು ಸಂವಿದಾನದ ಪ್ರತಿಜ್ಞಾ ವಿದಿಯನ್ನು ಬೋದಿಸಿದರು, ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂದ, ಬಾ಼ಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.