ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ತೀರ್ಪು ಪ್ರಕಟಿಸಿತು.