ನೆಲ್ಯಾಡಿ: ಪಿಎಂಶ್ರೀ ಶಾಲೆಯಲ್ಲಿ ಮಿನಿ ಪಾರ್ಕ್ ಉದ್ಘಾಟನೆ

ಶೇರ್ ಮಾಡಿ

ನೆಲ್ಯಾಡಿ ಪಿಎಂ ಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಎಂ ಶ್ರೀ ಯೋಚನೆ ಹಾಗೂ ಊರವರ ಸಹಕಾರದಿಂದ ನೂತನವಾಗಿ ಮಕ್ಕಳಿಗಾಗಿ ನಿರ್ಮಿಸಿದ ಮಿನಿ ಪಾರ್ಕ್ ಅನ್ನು ಮಾ.13 ರಂದು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ಮಾತನಾಡಿದ ಅವರು ಈ ಯೋಜನೆಯ ಮೂಲಕ ಶಾಲೆಯು ನಿರಂತರವಾಗಿ ಅಭಿವೃದ್ಧಿಯನ್ನು ಹೊಂದುತ್ತಿದ್ದು ಹಾಗೂ ಇದರ ಪ್ರಗತಿಗಾಗಿ ಸಹಕರಿಸುತ್ತಿರುವ ಶಾಲಾ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಊರವರಿಗೆ ಅಭಿನಂದನೆಯನ್ನು ಸಲ್ಲಿಸಿದರು, ಶಾಲೆಗೆ ಹೆಚ್ಚುವರಿ ಭೂಮಿಗಾಗಿ ಈ ಹಿಂದೆ ಪಂಚಾಯಿತಿಗೆ ಮನವಿಯನ್ನು ಸಲ್ಲಿಸಲಾಗಿತ್ತು, ಇದಕ್ಕೆ ಸಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ನೆಲ್ಯಾಡಿ ಗ್ರಾಮ ಪಂಚಾಯತಿನ ಅಧ್ಯಕ್ಷರು ಹಾಗೂ ಸದಸ್ಯರನ್ನು ಈ ಸಂದರ್ಭದಲ್ಲಿ ಶಾಸಕಿ ಅಭಿನಂದಿಸಿದರು. ಅಲ್ಲದೆ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಗೆ ಹೆಚ್ಚುವರಿ ಅನುದಾನವನ್ನು ಒದಗಿಸಿಕೊಡುವ ಭರವಸೆ ನೀಡುವುದರೊಂದಿಗೆ ಶೀಘ್ರವಾಗಿ ಕಟ್ಟಡವನ್ನು ನಿರ್ಮಿಸಿ ಕೊಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು.

ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್ ಆರ್ , ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್, ಉಪಾಧ್ಯಕ್ಷೆ ಶ್ರೀಮತಿ ರೇಷ್ಮ ಶಶಿ, ಸದಸ್ಯ ಅಬ್ದುಲ್ ಜಬ್ಬಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಬಿನೋಜ್, ಉಪಾಧ್ಯಕ್ಷರಾದ ಸವಿತಾ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಸರಕಾರಿ ನೌಕರರ ಸಂಘದ ಕಡಬ ತಾಲೂಕು ಅಧ್ಯಕ್ಷರು, ಶಾಲಾ ಶಿಕ್ಷಕರು ಆಗಿರುವ ವಿಮಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಗುರು ವೀಣಾ ಮಸ್ಕರೇನ್ಹಸ್ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಜಯಂತಿ ವಂದಿಸಿದರು. ಶಿಕ್ಷಕರು ಸಹಕರಿಸಿದರು.

Leave a Reply

error: Content is protected !!