ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಬಿಗ್ ಬಿ ಖ್ಯಾತಿಯ ಬಚ್ಚನ್, ತಾವು ಆಸ್ಪತ್ರೆಗೆ ದಾಖಲಾದ ಸುದ್ದಿ ವೈರಲ್ ಆಗುವ ಕೆಲವೇ ಕ್ಷಣಗಳ ಮುನ್ನ ಎಂದೆಂದಿಗೂ ಕೃತಜ್ಞನಾಗಿರುವೆ ಎಂದು ಟ್ವೀಟ್ ಮಾಡಿದ್ದು, ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಲು ಈ ಪೋಸ್ಟ್ ಹಂಚಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.