ನೆಲ್ಯಾಡಿ: ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮಾ.18ರಿಂದ 20ರ ತನಕ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ದೋಷಗಳ ಪರಿಹಾರ ಕಾರ್ಯಕ್ರಮ ಹಾಗೂ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಮಾ.18ರಂದು ಬೆಳಿಗ್ಗೆ 8.00ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಭದ್ರದೀಪ ಸಮರ್ಪಣೆ, ಮುಷ್ಠಿ ಕಾಣಿಕೆ ಸಮರ್ಪಣೆ, ಸರ್ಪಸಂಸ್ಕಾರ ಮಂಗಲ ಹೋಮ, ಆಶ್ಲೇಷಬಲಿ, ಪವಮಾನ ಹೋಮ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ, ಸಂಜೆ 5.00ರಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ಅವಾಹನೆ, ಬಾಧಾಕರ್ಷಣೆ, ಉಚ್ಛಾಟನೆ ನಡೆಯಲಿದೆ. ಮಾ.19ರಂದು ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ಕೂಷ್ಮಾಂಡ ಹೋಮ, ದ್ವಾದಶಮೂರ್ತಿ ಆರಾಧನೆ, ಸಾಯುಜ್ಯ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5.00ರಿಂದ ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ ನಡೆಯಲಿದೆ. ಮಾ.20ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಸಂಹಾರತತ್ತ್ವ ಹೋಮ, ತತ್ತ್ವ ಕಲಶ ಪೂಜೆ, ಅನುಜ್ಞಾಕಲಶ ಪೂಜೆ, ಅನುಜ್ಞಾಕಲಶಾಭಿಷೇಕ, ಸಂಹಾರ ತತ್ತ್ವ ಕಲಶಾಭಿಷೇಕ, ಧ್ಯಾನ ಸಂಕೋಚ ಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ ಕ್ರಿಯೆ, ಬಾಲಾಲಯದಲ್ಲಿ ಶ್ರೀ ಮಹಾವಿಷ್ಣು ಹಾಗೂ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.