ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.
ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.
ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಕಬಕದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಇದರಿಂದ ಕಾರು ಚರಂಡಿಗೆ ಬಿದ್ದಿದೆ.
ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ರಕ್ಷಿಸಿದ ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬಜರಂಗದಳದ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದಾರೆ.