ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣದ ಸೇರಿ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿ ವಿಚಾರಣೆ ತೀವ್ರ ಗೊಳಿಸಿದ್ದು,ಅವರ ಪುತ್ರ ಪ್ರಜ್ವಲ್ ರೇವಣ್ಣ ವಿದೇಶ ಪ್ರವಾಸ ಮೊಟಕುಗೊಳಿಸಿ ಇಂದೇ (ಭಾನುವಾರ) ಎಸ್ಐಟಿ ಮುಂದೆ ಪ್ರಜ್ವಲ್ ಶರಣಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಹಾಸನದ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಜರ್ಮನಿ ಪ್ರವಾಸಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗ ಎಸ್ಐಟಿ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯೊಬ್ಬರು ಕೊಟ್ಟ ದೂರಿನ ಆಧಾರದ ಮೇಲೆ ಪ್ರಜ್ವಲ್ ಬಂಧನಕ್ಕೆ ಎಸ್ಐಟಿ ತೀವ್ರ ಶೋಧ ನಡೆಸುತ್ತಿದೆ. ಇತ್ತ ತಂದೆ ಎಚ್.ಡಿ.ರೇವಣ್ಣ ಬಂಧನಕ್ಕೊಳಗಾಗಿರುವುದರಿಂದ ಇನ್ನಷ್ಟು ಒತ್ತಡ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಿಂದ ಬೆಂಗಳೂರಿಗೆ ಮರಳುತ್ತಿದ್ದು ಎಸ್ಐಟಿ ಮುಂದೆ ಶರಣಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ಗೆ ತಮ್ಮನ್ನು ಎಸ್ಐಟಿ ಅಧಿಕಾರಿಗಳು ಬಂಧಿಸುವುದು ಖಚಿತವಾಗಿದ್ದು, ದೇಶಕ್ಕೆ ಕಾಲಿಟ್ಟ ಕೂಡಲೇ ಏರ್ಪೋರ್ಟ್ ಸಿಬಂದಿಯೇ ವಶಕ್ಕೆ ಪಡೆದು ಎಸ್ಐಟಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಎಲ್ಲ ಬೆಳವಣಿಗೆಗಳ ಬಳಿಕ ವಕೀಲರ ಸಲಹೆ ಪಡೆದು ಶರಣಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.