
ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರು ಸಮೀಪದ ಮಾವಿನಕಟ್ಟೆಯಲ್ಲಿ ಶನಿವಾರ ಸಂಭವಿಸಿದೆ.
ಕನಕಮಜಲಿನ ಸತೀಶ್ ನೆಡಿಲು ಅವರು ಸುಳ್ಯದಿಂದ ಕನಕಮಜಲು ಕಡೆಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮಾವಿನಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆ ಮತ್ತು ಕೈಕಾಲುಗಳಿಗೆ ಗಂಭೀರ ಗಾಯವಾಗಿದೆ.
ಸ್ಥಳೀಯರು ಸೇರಿ ಅವರನ್ನು ಆ್ಯಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.






