ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ಸುಮಾರು 1 ತಾಸು ವಾಹನ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಮೇ 12ರಂದು ಸಂಜೆ ನಡೆದಿದೆ.
ಶಿರಾಡಿ ಭಾಗದಲ್ಲಿ ಸಂಜೆ ಗಾಳಿ ಸಹಿತ ಮಳೆಯಾಗಿದ್ದು ಭಾರೀ ಗಾಳಿಗೆ ಹೆದ್ದಾರಿ ಬದಿಯ ಮರವೊಂದು ರಸ್ತೆಗೆ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಹೆಡ್ಕಾನ್ಸ್ಟೇಬಲ್ ಕುಶಾಲಪ್ಪ ನಾಯ್ಕ್, ಸಿಬ್ಬಂದಿ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದೊಂದಿಗೆ ಸುರಿಯುವ ಮಳೆಯ ನಡುವೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.