ಲಾರಿ ಹರಿದು ಬೈಕ್ ಸವಾರ ನೆಲ್ಯಾಡಿಯ ಹೋಟೆಲ್‌ವೊಂದರ ಕಾರ್ಮಿಕ ನಿಧನ

ಶೇರ್ ಮಾಡಿ

ನೆಲ್ಯಾಡಿ: ಮೇ 14ರಂದು ರಾತ್ರಿ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳ ಸುಜೀರ್‌ಕ್ರಾಸ್‌ನಲ್ಲಿ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರಿಬ್ಬರು ನೆಲ್ಯಾಡಿಯ ಹೋಟೆಲ್‌ವೊಂದರಲ್ಲಿ ಕಾರ್ಮಿಕರಾಗಿದ್ದರು ಎಂದು ತಿಳಿದುಬಂದಿದೆ.

ಬೈಕ್ ಸವಾರ ಉತ್ತರಪ್ರದೇಶ ಮೂಲದ ಸೋನು(19ವ.) ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್(20ವ.)ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರಿಬ್ಬರು ನೆಲ್ಯಾಡಿಯ ಹೋಟೆಲ್‌ವೊಂದರಲ್ಲಿ ಕಾರ್ಮಿಕರಾಗಿದ್ದು ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಲಾರಿ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಈ ಅಪಘಾತ ಸಂಭವಿಸಿದೆ ಎಂದು ಬಂಟ್ವಾಳ ಸಂಚಾರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

Leave a Reply

error: Content is protected !!