ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೊಲೀಸ್ ಸಿದ್ಧತೆ

ಶೇರ್ ಮಾಡಿ

ಬೆಳ್ತಂಗಡಿ: ಕಳೆದ ಮೇ.18ರಂದು ಅಕ್ರಮ ಕಲ್ಲು ಕೋರೆ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನನ್ನು ವಿನಾಕಾರಣ ಬಂಧಿಸಲಾಗಿರುವುದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರಿಗೆ ನಿಂಧಿಸಿದ್ದರು.

ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದುವರಿದ ಭಾಗವಾಗಿ ಮೇ.20 ರಂದು ತಾಲೂಕು ಆಡಳಿತದ ಮುಂದೆ ಪ್ರತಿಭಟನೆ ನಡೆಸಿ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು.

ಈ ಹಿನ್ನೆಲೆ ಮೇ.22 ರಂದು ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ‌ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಇರಿಸಲಾಗಿದೆ.

ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.

Leave a Reply

error: Content is protected !!