ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ವತಿಯಿಂದ ಪಡುಬೆಟ್ಟು ಶಾಲೆಯಲ್ಲಿ ಮೇ 31ರಂದು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ, ಪಡುಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜೋನ್ ಮೊಂತೆರ ಅವರ ಅಧ್ಯಕ್ಷತೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಂಬಾಕು ವಸ್ತುಗಳ ಸೇವನೆಯಿಂದ ಮಾರಕ ಖಾಯಿಲೆಗಳು ಜಾಸ್ತಿಯಾಗುತ್ತಿದ್ದು ತಮ್ಮ ಮಕ್ಕಳನ್ನು ತಂಬಾಕು ಪದಾರ್ಥಗಳಿಂದ ದೂರ ಇರುವಂತೆ ಜಾಗೃತಿ ವಹಿಸಬೇಕೆಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ನೆಲ್ಯಾಡಿ ಪಿ ಎಂ ಶ್ರೀ ಶಾಲೆಯ ಪ್ರಾಧ್ಯಾಪಕಿ ಮೇರಿ ಜಾನ್ ಅವರು ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳು, ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಹಾರ್ಪಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.
ನೆಲ್ಯಾಡಿ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪ್ರಸ್ತಾವಿಕವಾಗಿ ಮಾತಾಡಿದರು, ಸೇವಾ ಪ್ರತಿನಿಧಿ ಮೋಹಿನಿ ನಿರೂಪಿಸಿ ವಂದಿಸಿದರು.