ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದಿಂದ ವಿಶ್ವ ಪರಿಸರ ದಿನ ಆಚರಣೆ

ಶೇರ್ ಮಾಡಿ

ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಎಲಿಯಾಸ್.ಎಂ.ಕೆ ಅವರ ಮಾರ್ಗದರ್ಶನದಲ್ಲಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಸಂಚಾಲಕ ರೆ.ಫಾ. ನೋಮಿಸ್ ಕುರಿಯಾಕೋಸ್ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಸಂತ ಜಾರ್ಜ್ ಪ್ರೌಢಶಾಲೆಯ ಮುಖ್ಯಗುರು ತೋಮಸ್.ಎಂ. ಐ ವಿದ್ಯಾರ್ಥಿಗಳಿಗೆ ಗಿಡಗಳನ್ನು ನೆಡುವ ತರಬೇತಿಯನ್ನು ನೀಡಿದರು. ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ವಿಶ್ವನಾಥ.ಶೆಟ್ಟಿ.ಕೆ. ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಶಾರೀರಿಕ ಶಿಕ್ಷಣ ಉಪನ್ಯಾಸಕ ಮಹಮ್ಮದ್ ಹ್ಯಾರಿಸ್, ಉಪನ್ಯಾಸಕ ವೃಂದ ಹಾಗೂ ಎನ್ನೆಸ್ಸೆಸ್ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

error: Content is protected !!