ನೆಲ್ಯಾಡಿ: ಜೆಸಿಐ ನೆಲ್ಯಾಡಿ ಆಶ್ರಯದಲ್ಲಿ ಪೆರ್ನೆ ಶ್ರೀ ರಾಮಚಂದ್ರ ಪ.ಪೂ.ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾಜಯಾನಂದ ಬಂಟ್ರಿಯಾಲ್ ಅವರು ಗಿಡನೆಡುವ ಮೂಲಕ ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶೇಖರ್ ರೈಯವರು ಮಾತನಾಡಿ, ಪರಿಸರದ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದಿನ ತಲೆಮಾರಿನ ಜನರು ಯಾವ ಪರಿಸ್ಥಿತಿಯನ್ನು ಎದುರಿಸಬೇಕಾದಿತು ಎಂಬ ಕುರಿತು ವಿವರಿಸಿದರು.
ಮುಖ್ಯ ಅತಿಥಿಯಾಗಿದ್ದ ಪುತ್ತೂರು ವಲಯ ಅರಣ್ಯಾಧಿಕಾರಿ ಯಶೋಧ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ರೈ ಯವರು ಶುಭ ಹಾರೈಸಿದರು.
ಚಿತ್ರಕಲಾ ಅಧ್ಯಪಕರಾದ ಚೆನ್ನಕೇಶವ ಡಿ.ಆರ್. ಕಾರ್ಯಕ್ರಮ ನಿರ್ವಹಿಸಿದರು. ವಲಯ ಅರಣ್ಯಧಿಕಾರಿ ಯಶೋಧ ಅವರನ್ನು ನೆಲ್ಯಾಡಿ ಜೇಸಿಐ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ನೆಲ್ಯಾಡಿ ಜೇಸಿ ಸದಸ್ಯರು, ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು. ಶಾಲೆಗೆ 200 ಗಿಡಗಳನ್ನು ಪುತ್ತೂರು ವಲಯ ಅರಣ್ಯ ಇಲಾಖೆಯ ವತಿಯಿಂದ ನೀಡಲಾಯಿತು.