ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಪರಿಸರ ದಿನಾಚರಣೆಯನ್ನು ಜೂ.5 ರಂದು ನಡೆಸಲಾಯಿತು.
ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ವಂ.ಪ್ರಕಾಶ್ ಪೌಲ್ ಡಿ’ಸೋಜ ವಹಿಸಿ ಮಾತನಾಡಿ ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ನಾಶವಾಗುತ್ತಿದೆ. ಆದುದರಿಂದ ನಮಗಾಗಿ ನಾವು ಪರಿಸರ ಸಂರಕ್ಷಣೆಯ ಕೆಲಸವನ್ನು ಮಾಡಬೇಕಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜುನ ಪ್ರಾಂಶುಪಾಲ ಜಾರ್ಜ್. ಟಿ.ಎಸ್ ಅವರು ಮಾತನಾಡಿ ಮನುಷ್ಯನ ದುರಾಸೆ ತುಂಬಿದ ಭೋಗ ಜೀವನವೇ ಕಾಡು ಹಾಗೂ ಕಾಡು ಪ್ರಾಣಿಗಳ ನಾಶಕ್ಕೆ ಕಾರಣವಾಗುತ್ತಿದೆ. ಆಧುನಿಕ ಯುಗದ ಪ್ಲಾಸ್ಟಿಕ್ ತ್ಯಾಜ್ಯ ಪ್ರಾಣಿಗಳ ಸಂಕುಲಕ್ಕೆ ಕಂಟಕವಾಗಿದೆ. ವನ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ಜವಾಬ್ದಾರಿಯನ್ನು ಯುವಜನಾಂಗ ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀಣ೯ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಸೈಂಟ್ ಆನ್ಸ್ ನ ಪ್ರಾಂಶುಪಾಲರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ಉಪಸ್ಥಿತರಿದ್ದರು.
ಪರಿಸರದ ಬಗ್ಗೆ ವಿದ್ಯಾರ್ಥಿಗಳಿಂದ ವೈವಿದ್ಯಮಯ ಕಾರ್ಯಕ್ರಮ ನಡೆಯಿತು. ಕುಮಿದ ಸ್ವಾಗತಿಸಿ, ಲತಾ ವಂದಿಸಿದರು. ಕಾರ್ಯಕ್ರಮವನ್ನು ಶಿಲ್ಪಾ ನಿರೂಪಿಸಿದರು.