ಆಲಂಕಾರು: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ದೃಷಿಯಿಂದ ಮತ್ತು ಸಾರ್ವತ್ರಿಕ ಚುನಾವಣಾ ವಿಧಾನಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.14ರಂದು ಚುನಾವಣಾ ಪ್ರಕ್ರಿಯೆಯನ್ನು ನಡೆಸಲಾಯಿತು.
ಚುನಾವಣಾ ಪ್ರಕ್ರಿಯೆಯ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಚುನಾವಣಾ ಅಧಿಸೂಚನೆಗಳನ್ನು ನೀಡಲಾಯಿತು. ಆಸಕ್ತ ಅಭ್ಯರ್ಥಿಗಳು ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ಅಭ್ಯರ್ಥಿಗಳು ತಮ್ಮ ಕೆಲವು ಆಶ್ವಾಸನೆಗಳ ಮೂಲಕ ಮತ ಯಾಚನೆ ಮಾಡಿದರು. ವಿದ್ಯಾರ್ಥಿಗಳೆಲ್ಲರೂ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಚುನಾವಣಾ ಮತ ಎಣಿಕೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯಮಂತ್ರಿಯಾಗಿ ಹಿತೇಶ್ ಗೌಡ ಹಾಗೂ ಉಪಮುಖ್ಯಮಂತ್ರಿಯಾಗಿ ರೋಹನ್.ಎಂ ಆಯ್ಕೆಯಾಗಿರುತ್ತಾರೆ.
ಶಾಲಾ ಮುಖ್ಯ ಗುರುಗಳಾದ ಸತೀಶ್ ಜಿ.ಆರ್ ಚುನಾವಣಾ ಫಲಿತಾಂಶ ಘೋಷಿಸಿ ವಿಜೇತರಾದ ಅಭ್ಯರ್ಥಿಗಳನ್ನು ಅಭಿನಂದಿಸಿದರು. ಶಿಕ್ಷಕಿ ರೂಪ ಚುನಾವಣಾ ಆಯುಕ್ತರಾಗಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಇತರ ಮಾತಾಜಿ ವೃಂದದವರು ಮತಗಟ್ಟೆಯ ಅಧಿಕಾರಿಗಳಾಗಿ ಸಹಕರಿಸಿದರು.