
ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪಾಲಕರ ಸಮಾವೇಶವನ್ನು ಜೂನ್ 20ರಂದು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ನಂದೀಶ್ ಅವರು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಎಂಬ ವಿಷಯದ ಬಗ್ಗೆ ಅರ್ಥಪೂರ್ಣವಾಗಿ ವಿವರಿಸಿದರು. ಮಕ್ಕಳ ಮಾನಸಿಕ, ಬೌದ್ಧಿಕ, ಶಾರೀರಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಅಮೂಲ್ಯವಾಗಿದೆ, ಪೋಷಕರ ನಡೆ-ನುಡಿಯನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಪೋಷಕರು ಮಕ್ಕಳಿಗೆ ಮಾದರಿ ಆಗಿರಬೇಕು. ಮಕ್ಕಳು ಮತ್ತು ಪಾಲಕರು ಬರಿ ಮಾರ್ಕ್ ಗೆ ಮಾತ್ರ ಶ್ರಮಿಸದೆ, ಸರ್ವತೋಮುಖ ಬೆಳವಣಿಗೆಯಲ್ಲಿ ಶ್ರದ್ಧೆ ವಹಿಸಬೇಕು ಎಂಬುದಾಗಿ ಹಿತನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಫಾ.ವಿಜೋಯ್ ವರ್ಗೀಸ್ ಮಾತನಾಡಿ ಸಂಸ್ಥೆಯಲ್ಲಿ ಶಿಸ್ತುಬದ್ಧ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಮಹತ್ವ ನೀಡುತ್ತಿದ್ದೇವೆ ಹಾಗು ಪಾಲಕರು ಸಹಕರಿಸುವಂತೆ ವಿನಂತಿಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಧರ ಗೌಡ ಗೋಳ್ತಿಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯು ಕಳೆದ ಶೈಕ್ಷಣಿಕ ವರ್ಷದಲ್ಲಿ ಎರಡೂ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದು ಹೆಮ್ಮೆಯ ವಿಷಯವಾಗಿದ್ದು ಇದಕ್ಕಾಗಿ ಆಡಳಿತ ಮಂಡಳಿ ಹಾಗು ಎಲ್ಲಾ ಶಿಕ್ಷಕರಿಗೂ ಪಾಲಕರ ಪರವಾಗಿ ಪುಷ್ಗುಚ್ಛ ನೀಡಿ ಅಭಿನಂದಿಸಿದರು.
ಉಪಾಧ್ಯಕ್ಷೆ ಭಾರತಿ, ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್, ಮುಖ್ಯ ಗುರುಗಳಾದ ಥಾಮಸ್ ಏ.ಕೆ, ಉಪನ್ಯಾಸಕ ವೃಂದ, ಶಿಕ್ಷಕ ವೃಂದ, ಶಿಕ್ಷಕೇತರರು, ಪಾಲಕರು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಜೋರ್ಜ್ ಟಿ ಎಸ್ ಸ್ವಾಗತಿಸಿ ಶೈಕ್ಷಣಿಕ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಕು.ಶಾಲಿನಿ ಪ್ರಸಕ್ತ ವರ್ಷದ ಮಂಗಳೂರು ವಿ.ವಿ.M.PED ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸಿದ್ದು ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು ಹಾಗು ಸಂಸ್ಥೆಯಲ್ಲಿ ಕಲಿಯುತ್ತಿರುವ NMMS ಹಾಗು Inspire Award ವಿಜೇತ ವಿದ್ಯಾರ್ಥಿಗಳಾದ ಮಾ.ಜಾನ್ಸನ್ ಜೋಸೆಫ್ ಹಾಗು ಅಭಿಷೇಕ್ ಅನಿ ಇವರಿಗೆ ಸ್ಮರಣಿಕ ನೀಡಿ ಗೌರವಿಸಲಾಯಿತು.
ಮುಖ್ಯ ಗುರುಗಳಾದ ತೋಮಸ್ ಏ.ಕೆ. ವಂದಿಸಿದರು. ಕುಮಾರಿ ಸಫ್ರಿನ ಕಾರ್ಯಕ್ರಮವನ್ನು ನಿರೂಪಿಸಿದರು.









