ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗ

ಶೇರ್ ಮಾಡಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು. ಪೂಜಾರಿ ಅವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು.

ಗಣ್ಯರ ಸಂತಾಪ:
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಂಕರ್ ಕುಂದರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!