ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.

ಕಡಬ ಆರಕ್ಷಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಭಿನಂದನ್ ದೀಪ ಬೆಳಗಿಸಿ ಉದ್ಘಾಟಿಸಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ವಿವರಿಸಿದರು. ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಯುವ ಪೀಳಿಗೆಯ ವಿನಾಶ ದತ್ತ ಸಾಗುತ್ತಿದೆ. ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಜನರನ್ನು ರಕ್ಷಿಸಲು ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್ 26ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಿಸಲಾಗುತ್ತಿದೆ ಎಂದರು.

ಸಂಸ್ಥೆಯ ನಿರ್ದೇಶಕ ಫಾ.ವಿಜೋಯ್ ವರ್ಗೀಸ್, ಕಡಬ ಆರಕ್ಷಕ ಠಾಣೆಯ ಪೊಲೀಸ್ ಸಿಬ್ಬಂದಿ, ಪ್ರಾಂಶುಪಾಲ ಜಾರ್ಜ್ ಟಿ.ಎಸ್, ಮುಖ್ಯ ಗುರು ಥೋಮಸ್ ಏ.ಕೆ, ಉಪನ್ಯಾಸಕರು, ಶಿಕ್ಷಕರು, ಶಿಕ್ಷಕೇತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

error: Content is protected !!