ಕೊಕ್ಕಡ: ಶಿಶಿಲ ಗಿರಿಜನ ಕಾಲೋನಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರ ಇದುವರೆಗೆ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದೀಗ ನೂತನವಾಗಿ ನಿರ್ಮಾಣಗೊಂಡ ಕಟ್ಟಡಕ್ಕೆ ಸ್ಥಳಾಂತರ ಕಾರ್ಯಕ್ರಮ ನಡೆಯಿತು.
ಅಂಗನವಾಡಿಯ ಸ್ಥಾಪಕ ಕಾರ್ಯಕರ್ತೆಯಾಗಿ 1986 ರಿಂದ 1991ರ ವರೆಗೆ ಸೇವೆ ಸಲ್ಲಿಸಿದ ನೀಲಮ್ಮ ರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧಿನ್.ಡಿ ವಹಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಪಂಚಾಯಿತಿ ಉಪಾಧ್ಯಕ್ಷ ಯಶೋಧರ. ಕೆ.ವಿ, ಶಿಶಿಲ ಬ್ಯಾಂಕ್ ಆಫ್ ಬರೋಡ ಪ್ರಬಂಧಕ ರಾಕೇಶ್ ನಾಯ್ಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಮಲಾಕ್ಷಿ, ಲಲಿತ, ತಾ.ಪಂ ಮಾಜಿ ಸದಸ್ಯೆ ಚೇತನ ಚಂದ್ರಶೇಖರ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇವತಿ ಉಪಸ್ಥಿತರಿದ್ದರು.
ಬಾಲವಿಕಾಸ ಸಮಿತಿ ಸದಸ್ಯರು, ವಾಲ್ಮೀಕಿ ಶಾಲಾ ಸಿಬ್ಬಂದಿಗಳು, ಪಂಚಾಯಿತಿ ಸಿಬ್ಬಂದಿ ಗಳು, ಪೋಷಕರು, ಗ್ರಾಮಸ್ಥರು, ಯುವಕ ಮಂಡಲ ಸದಸ್ಯರು, ಸ್ತ್ರೀ ಶಕ್ತಿ ಒಕ್ಕೂಟ, ಸಂಜೀವಿನಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಸಹಾಯಕಿ ಕಾರ್ಯಕ್ರಮಕ್ಕೆ ಸಹಕರಿಸಿದರು.
ಅಂಗನವಾಡಿ ಕಾರ್ಯಕರ್ತೆ ಯಶೋದಾ ಸ್ವಾಗತಿಸಿ ಧನ್ಯವಾದವಿತ್ತರು, ರಮೇಶ ಬೈರಕಟ್ಟ ಕಾರ್ಯಕ್ರಮ ನಿರೂಪಿಸಿದರು.