SCDCC ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ; ಒಟ್ಟು 125 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೇರ್ ಮಾಡಿ

ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ . ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 ಆಗಿದ್ದು, ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ
ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ 2 ಎ: 18, ಪ್ರವರ್ಗ 2 ಬಿ: 5, ಪ್ರವರ್ಗ 3 ಎ: 5, ಪ್ರವರ್ಗ 3 ಬಿ: 6 ಹುದ್ದೆಗಳಿವೆ.

ವಿದ್ಯಾರ್ಹತೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜತೆಗೆ ಕಂಪ್ಯೂಟರ್‌ ಆಪರೇಷನ್‌ ಮತ್ತು ಅಪ್ಲಿಕೇಷನ್‌ ಜ್ಞಾನದೊಂದಿಗೆ ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್‌ ಡಿಪ್ಲೋಮಾ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್‌ ತರಬೇತಿ ಪಡೆದ ಸರ್ಟಿಫಿಕೆಟ್‌ ಹೊಂದಿರಬೇಕು. ಕಂಪ್ಯೂಟರ್‌ ಸೈನ್‌ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ.

ಮಾಸಿಕ ವೇತನ
ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ 24,910 ರೂ. – 55,655 ರೂ. ಮಾಸಿಕ ವೇತನ ಜತೆಗೆ ಡಿಎ & ಎಚ್.ಆರ್.ಎ. ಮುಂತಾದ ಸೌಲಭ್ಯ ದೊರೆಯಲಿದೆ.

ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1,180 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕೆ1 ಸೇರಿದ ಅಭ್ಯರ್ಥಿಗಳು 590 ರೂ. ಪಾವತಿಸಬೇಕು.

ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್‌, ಸಾಮಾನ್ಯ ಜ್ಞಾನ, ಸಹಕಾರಿ ವಿಷಯ / ಬ್ಯಾಂಕಿಂಗ್‌ ಕ್ಷೇತ್ರದ ಬಗ್ಗೆ, ಭಾರತದ ಸಂವಿಧಾನ, ಸಮಾಜದ ಯುಕ್ತವಾದ ಚಟುವಟಿಕೆ ಮತ್ತು ವಸ್ತುನಿಷ್ಟ ವಿಷಯಗಳ ಪ್ರಶ್ನೆಗಳಿರುತ್ತವೆ.

ಅಲ್ಲಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://scdccbank.com/recruitment/)
ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿದ ಬಳಿಕ ಡೌನ್‌ಲೋಡ್‌ ಮಾಡಿ ಪ್ರಿಂಟ್‌ ಔಟ್‌ ತೆಗೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 18ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ:
The Chief Executive Officer,
The South Canara District Central Cooperative Bank Ltd., Kodialbail,
Mangalore – 575 003

ಹೆಚ್ಚಿನ ಮಾಹಿತಿಗೆ: (0824) – 2440381, 2440882 ನಂಬರ್‌ಗೆ ಕರೆ ಮಾಡಿ.

ಹೆಚ್ಚಿನ ಮಾಹಿತಿಗಾಗಿ https://scdccbank.com/recruitment/addi-notification.pdf ವೆಬ್ ವಿಳಾಸಕ್ಕೆ ಭೇಟಿ ನೀಡಿ.

Leave a Reply

error: Content is protected !!