
ನೆಲ್ಯಾಡಿ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು ಹಾಗೂ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು ಅವರ ತಾಯಿ ಕೌಕ್ರಾಡಿ ಗ್ರಾಮದ ಬಾಣಜಾಲು ನಿವಾಸಿ ದಿ. ಪೂಜಾರಿ ಅವರ ಧರ್ಮಪತ್ನಿ ಅಪ್ಪಿ ಬಾಣಜಾಲು(87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾದರು.
ಮೃತರಿಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು ಹಾಗೂ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು ಸೇರಿ 7 ಜನ ಗಂಡು ಹಾಗೂ 2 ಎರಡು ಹೆಣ್ಣು ಮಕ್ಕಳು ಇದ್ದಾರೆ.






