ಕೊಕ್ಕಡ ಅಮೃತ ಗ್ರಾಮ ಪಂಚಾಯತಿ ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಆ.5ರಂದು ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಕೊಕ್ಕಡ ಅಂಬೇಡ್ಕರ್ ಸಭಾಭವನ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಕುಶಾಲಪ್ಪ ಗೌಡ ಪೂವಾಜೆ ನೆರವೇರಿಸಿದರು.
ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್ ಮ್ಹಾಲಕ ಕೆ.ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕೊಕ್ಕಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಬೇಬಿ ವಹಿಸಿದರು.
ಮುಖ್ಯ ಅತಿಥಿಗಳಾಗಿ ಕೊಕ್ಕಡ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸಮಾಜ ಸೇವಕ ಬಾಲಕೃಷ್ಣ ನೈಮಿಷ ಸೌತಡ್ಕ, ಕೊಕ್ಕಡ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪುಡ್ಕೆತ್ತೂರು, ಶ್ರೀಮತಿ ವಸಂತಿ ಶಬರಾಡಿ, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಪವಿತ್ರಾಗುರುಪ್ರಸಾದ್, ಸದಸ್ಯ ಪುರುಷೋತ್ತಮ ಉಪಸ್ಥಿತರಿದ್ದರು.
ಶಿಬಿರವು ಆ.5 ರಿಂದ ಆ.19ರವರೆಗೆ ಪೂರ್ವಾಹ್ನ 9.30 ರಿಂದ ಅಪರಾಹ್ನ 4.30 ರವರೆಗೆ ನಡೆಯಲಿದೆ.