ನೇಸರ ಫೆ.22: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಹಾಗೂ ತರಬೇತಿ ಶಿಬಿರವನ್ನು ರಾಜ್ಯದಾದ್ಯಂತ ಆಯೋಜಿಸಲಾಗಿದೆ.ಈ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.21ರಂದು ಅರ್ಹ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬದ ಎಲ್ಲಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಮಜ್ದೂರ್ ಸಂಘದ ಅಧ್ಯಕ್ಷ ಸುಬ್ಬಣ್ಣ ಗೌಡ, ಕಾರ್ಯದರ್ಶಿ ರಾಜ್ ಕಿಶೋರ್ ಪಡ್ಪು, ಗ್ರಾಮ ಪಂಚಾಯತಿನ ಅಧ್ಯಕ್ಷ ಸಂದೀಪ್, ಉಪಾಧ್ಯಕ್ಷ ವಿಮಲ, ಸದಸ್ಯರಾದ ಸುಧಿನ್, ಯತೀಶ್, ಲಲಿತಾ ಮೊದಲಾದವರು ಉಪಸ್ಥಿತರಿದ್ದರು
—ಜಾಹೀರಾತು—