ಮಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಸಾಹಿತಿ ಹಾಗೂ ಕಲಾವಿದರಾದ ಸದಾನಂದ.ಬಿ ಮುಂಡಾಜೆ ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಮಹತ್ವ, ಆಚರಣೆ, ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಜಾಲಿ.ಓ.ಎ ಹಿರಿಯರ ಆಚಾರ ವಿಚಾರಗಳು ಮುಂದಿನ ಪೀಳಿಗೆಗೆ ಭದ್ರ ಬುನಾದಿಯಾಗಿರುತ್ತದೆ ಅವರ ಆದರ್ಶದ ಬದುಕು ವಿದ್ಯಾರ್ಥಿಗಳದ್ದಾಗಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು, ಸಾಂಸ್ಕೃತಿಕ ಸಂಘದ ಮುಖ್ಯಸ್ಥೆ ಗೀತಾ ಸ್ವಾಗತಿಸಿದರು, ದೈಹಿಕ ಶಿಕ್ಷಣ ನಿರ್ದೇಶಕರಾದ ಸಂದೀಪ್ ಐ ವಂದಿಸಿದರು.
ತುಳುನಾಡಿನ ಸಂಸ್ಕೃತಿ ಪರಂಪರೆಗಳನ್ನು ಬಿಂಬಿಸುವ ತುಳು ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಆಟಿ ತಿಂಗಳ ತಿನಿಸುಗಳ ಪ್ರದರ್ಶನ ಹಾಗೂ ಆಟಿಯ ಭೋಜನ ಕಾರ್ಯಕ್ರಮದ ವಿಶೇಷವಾಗಿತ್ತು.