ಮಳೆ ಬಂದರೆ ಕೆಸರು, ಮಳೆ ನಿಂತರೆ ಧೂಳು ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಆರೋಪ

ಶೇರ್ ಮಾಡಿ

ಮಳೆ ಬಂದರೆ ಕೆಸರು, ಮಳೆ ನಿಂತರೆ ಧೂಳು. ಇದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾದಂದಿನಿಂದ ನಡೆದು ಬಂದ ಹಾದಿ ಇನ್ನೂ ಕಾಮಗಾರಿ ಮುಗಿಯುವವರೆಗೂ ತಪ್ಪಿದ್ದಲ್ಲ.

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿ ಮಾತು ತಪ್ಪಿದರೂ ಇಲ್ಲಿನ ಸಮಸ್ಯೆ ಮಾತ್ರ ತಪ್ಪಿಲ್ಲ ನಿತ್ಯ ನಿರಂತರವಾಗಿ ಕಳೆದ ಅನೇಕ ವರ್ಷಗಳಿಂದ ಸಮಸ್ಯೆಯಿಂದ ಬಳಲಿ ರೊಚ್ಚಿಗೆದ್ದ ಸಾರ್ವಜನಿಕರು ಕಂಪೆನಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ ಘಟನೆ ಅ.12 ರಂದು ಸೋಮವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರಿನಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ಜೊತೆಗೆ ಕೊಣಾಜೆ ಯೂನಿವರ್ಸಿಟಿ ಸಂಪರ್ಕದ ಕೇಂದ್ರ ಸ್ಥಾನವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮೆಲ್ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ನಿತ್ಯ ಗೋಳು ತಪ್ಪಿದ್ದಲ್ಲ. ಮಳೆ ಬಂದರೆ ಕೆಸರು ತುಂಬಿದರೆ, ಮಳೆ ನಿಂತರೆ ಧೂಳು ಸಮಸ್ಯೆ. ಇದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಕಂಪೆನಿ ವಿಫಲವಾದ ಹಿನ್ನೆಲೆಯಲ್ಲಿ ,ತಾಳ್ಮೆಯನ್ನು ಕಳೆದಕೊಂಡ ಇಲ್ಲಿನ ವ್ಯಾಪಾರಸ್ಥರು, ಅಂಗಡಿ ಮಾಲಕರು, ಮತ್ತು ಸಾರ್ವಜನಿಕರು ಒಮ್ಮತದಿಂದ ಕಂಪೆನಿಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಮಳೆಗಾಲದಲ್ಲಿ ಹೊಂಡಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ಮಾಡುವಂತಿಲ್ಲ, ಇದು ಒಂದು ಭಾಗವಾದರೆ, ಇಲ್ಲಿನ ಅಂಗಡಿಗಳಿಗೆ , ಪಾದಾಚಾರಿಗಳಿಗೆ ಹಾಗೂ ಬೈಕ್ ಸವಾರರ ಮೇಲೆ ಗುಂಡಿಯ ಕೆಸರು ನೀರು ಎರಚಿ ಕೆಸರುನೀರಿನ ಸ್ನಾನ ಮಾಡಿಸಿದ ಕಂಪೆನಿಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಎರಡು ದಿನಗಳಿಂದ ಮಳೆ ನಿಂತ ಪರಿಣಾಮ ಮಣ್ಣು ಮಿಶ್ರಿತ ರಸ್ತೆಯಲ್ಲಿ ಧೂಳು ಏಳುತ್ತಿದ್ದು ಅಂಗಡಿ ಮಾಲಕರು ವ್ಯಾಪಾರ ಮಾಡುವಂತಿಲ್ಲ,ಹತ್ತಿರದ ಮನೆಯವರು ವಾಸ ಮಾಡುವಂತಿಲ್ಲ. ನಿತ್ಯ ಧೂಳಿನಿಂದ ಸ್ಥಳೀಯ ನಿವಾಸಿಗಳು ಕೆಮ್ಮು ಸಹಿತ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುವ ಸಾಧ್ಯತೆಗಳಿವೆ ಎಂದು ಸಾರ್ವಜನಿಕರು ಆಳಲು ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟವಾದ ದಿನದಂದು ಸಮಸ್ಯೆ ಬಗೆಹರಿಸುವ ಬಗ್ಗೆ ಮಾತು ಕೊಟ್ಟ ಬಳಿಕವೇ ತಡೆದ ವಾಹನಗಳನ್ನು ಹೋಗಲು ಬಿಡುವುದು ಎಂಬ ತಾಕೀತು ಹಾಕಿದ್ದರು.

ಕೊನೆಗೆ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಒಂದು ವಾರದೊಳಗೆ ಅಂದರೆ ಅ.18 ರಂದು ಸೋಮವಾರದ ಬಳಿಕ ಮೆಲ್ಕಾರಿನಲ್ಲಿ ರಸ್ತೆಗೆ ಡಾಮರು ಹಾಕಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ವ್ಯಾಪಾರ ಕೇಂದ್ರವಾಗಿ ಬೆಳೆಯುತ್ತಿರುವ ಮೆಲ್ಕಾರಿನಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಅಂಡರ್ ಪಾಸ್ ಮಾಡಿ ಇಲ್ಲಿನ ವ್ಯಾಪರಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂಬ ಆರೋಪವನ್ನು ಈ ಹಿಂದೆ ಮಾಡಿದ್ದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ, ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷ ಎನ್.ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್.ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ.ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Leave a Reply

error: Content is protected !!