ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಉದನೆ ಇದರ ಸಹಯೋಗದೊಂದಿಗೆ ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.
ಸೈಂಟ್ ಅಂಟನಿಸ್ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಶ್ರೀಧರ ಗೌಡ.ಬಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನೆಲ್ಯಾಡಿ ಜನಜಾಗೃತಿ ವೇದಿಕೆ ಸದಸ್ಯರ ಬಾಲಕೃಷ್ಣ ಹಾರ್ಪಳ ವಹಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಅವರು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನತೆಯ ಪಾತ್ರ ಬಹಳ ಅಗತ್ಯ ಹದಿಹರೆಯದ ವಯಸ್ಸಿನಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಿರಬೇಕು ಸಪ್ತ ವ್ಯಸನಗಳ ಬಗ್ಗೆ, ಪಂಚಮಹಾ ಕಾಯಿಲೆಯ ಬಗ್ಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ಮುಖ್ಯಗುರು ಯಶೋಧರ.ಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಪುತ್ತಿಗೆ ಒಕ್ಕೂಟದ ಅಧ್ಯಕ್ಷ ಲೋಕಯ್ಯ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ತಾಲೂಕಿನ ಯೋಜನಾಧಿಕಾರಿಗಳಾದ ಮೇದಪ್ಪ ಗೌಡ ನಾವೂರು, ಉದನೆ ಸಾರ್ವಜನಿಕ ಗಣೇಶೊತ್ಸವ ಸಮಿತಿ ಗೌರವಾಧ್ಯಕ್ಷ ದಿವಾಕರ ಗೌಡ, ನೆಲ್ಯಾಡಿ ವಲಯದ ಮೇಲ್ವಿಚಾರಕ ಆನಂದ ಡಿ.ಬಿ, ಕೃಷಿ ಮೇಲ್ವೀಚಾರಕ ಸೋಮೇಶ್ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ಸುಮಿತ್ರ, ಪ್ರಿಯಾಲತಾ ಸಹಕರಿಸಿದರು.