ನೇಸರ ಫೆ.23: ಕರ್ನಾಟಕ ಸರಕಾರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಹಾಗೂ ತರಬೇತಿ ಶಿಬಿರವನ್ನು ರಾಜ್ಯದಾದ್ಯಂತ ಆಯೋಜಿಸಲಾಗಿದೆ.ಈ ನಿಟ್ಟಿನಲ್ಲಿ ಕೊಕ್ಕಡ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ಅರ್ಹ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬದ ಎಲ್ಲಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಗ್ರಾಮ ಪಂಚಾಯತ್ ಕೊಕ್ಕಡ,ಭಾರತೀಯ ಮಜ್ದೂರ್ ಸಂಘ ಕೊಕ್ಕಡ ಹಾಗೂ ಸಿಎ ಬ್ಯಾಂಕ್ ಕೊಕ್ಕಡ ಇದರ ಸಹಯೋಗದಲ್ಲಿ ಫೆ.23ರಂದು ಆಯೋಜಿಸಲಾಯಿತು.
ದೀಪ ಪ್ರಜ್ವಲಿಸುವ ಮೂಲಕ ಸಿ ಎ ಬ್ಯಾಂಕಿನ ಅಧ್ಯಕ್ಷರಾದ ಕುಶಾಲಪ್ಪಗೌಡ ಪೂವಾಜೆ ಉದ್ಘಾಟಿಸಿ ಮಾತನಾಡಿ ಜನಸಾಮಾನ್ಯರಿಗೆ ಸರಕಾರವು ಹಮ್ಮಿಕೊಳ್ಳುವ ಈ ರೀತಿಯ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯವಾಗಿದೆ, ಅರ್ಹ ಫಲಾನುಭವಿಗಳು ಈ ಸವಲತ್ತನ್ನು ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯೋಗೀಶ್ ಅಲಂಬಿಲ, ಶಿಬಿರದ ವೈದ್ಯಾಧಿಕಾರಿಯಾದ ಡಾ.ಸುಶಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸಿಎ ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್,ಮಜ್ದೂರ್ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ರಮೇಶ್ ಅಲಂಬಿಲ,ಕಾರ್ಯದರ್ಶಿ ಶೇಖರ್ ಗಾಣಗಿರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಚಾಯತ್ ನ ಸದಸ್ಯರು,ಪಂಚಾಯತ್ ನ ಸಿಬ್ಬಂದಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
—ಜಾಹೀರಾತು—