ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ವತಿಯಿಂದ ಬಂಟ ಬಾಂಧವರ “ಸೋಣಡೊಂಜಿ ಬಂಟೆರೆ ಸೇರಿಗೆ” ಹಾಗೂ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ನೆಲ್ಯಾಡಿಯ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನಡೆಯಿತು.
ದೀಪ ಪ್ರಜ್ವಲನೆ ಮೂಲಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಪ್ರತಾಪ್ ಚಂದ್ರ.ರೈ ಕುದ್ಮಾರುಗುತ್ತು ವಹಿಸಿದ್ದರು.
ತಾಲೂಕು ಬಂಟರ ಸಂಘದ ಅಧ್ಯಕ್ಷ ಎ.ಹೇಮನಾಥ್ ಶೆಟ್ಟಿ ಕಾವು, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ನುಳಿಯಾಳು, ಕಡಬ ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್.ರೈ ಮೈಲೇರಿ, ಪುತ್ತೂರು ಬಂಟರ ಮಹಿಳಾ ಅಧ್ಯಕ್ಷೆ ಗೀತಾ ಮೋಹನ್, ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಮಾತೃ ಸಂಘದ ನಿರ್ದೇಶಕಿ ವಾಣಿ ಸುಂದರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ :
ಅಂಚೆ ಇಲಾಖೆ ನಿವೃತ್ತ ಪೋಸ್ಟ್ ಮಾಸ್ಟರ್ ರಾಮಣ್ಣ ಶೆಟ್ಟಿ, ಮೈಸೂರು ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ್ ಪ್ರೈವೆಟ್ ಲಿ ನ ನಿವೃತ್ತ ಸಹಾಯಕ ಮಹಾಪ್ರಬಂದಕ ರಾಜಾರಾಮ.ಎಂ ಶೆಟ್ಟಿ, ಡಾ.ಸುಧಾಕರ ಶೆಟ್ಟಿ, ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ.ಜೆ ಬಂಟ್ರಿಯಾಲ್ ಅವರನ್ನು ಸನ್ಮಾನಿಸಲಾಯಿತು.
ಆರ್ಯಭಟ್ಟ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ವಿಶ್ವನಾಥ ಶೆಟ್ಟಿ ಹಾಗೂ ವಲಯ ಬಂಟರ ಕಲಾ ಪ್ರತಿಭೆಗಳಿಂದ ಲಹರಿ ಸಂಗೀತ ರಸಮಂಜರಿ ಹಾಗೂ ಮನೋರಂಜನೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಸಂಘದ ಗೌರವಾಧ್ಯಕ್ಷ ವಿಶ್ವನಾಥ್ ಶೆಟ್ಟಿ ಶ್ರೀಮಾತಾ ಸ್ವಾಗತಿಸಿದರು. ಕಾರ್ಯದರ್ಶಿ ಮಹಾಬಲ ಶೆಟ್ಟಿ ದೋಂತಿಲ ವಂದಿಸಿದರು. ಉಪನ್ಯಾಸಕ ವಿಶ್ವನಾಥ್ ಶೆಟ್ಟಿ.ಕೆ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಆನಂದ ಶೆಟ್ಟಿ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸರ್ವ ಸದಸ್ಯರು ಸಹಕರಿಸಿದರು.