ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರದಲ್ಲಿ ಆ.23ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್ ಕೊಟ್ಟಿದೆ. ಮುಂದಿನ ಎರಡು ದಿನ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ.