‘ಹರಿತ ಆಯುಧದಿಂದ ಕೈಗೆ ಇರಿಯಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿ ಮೇಲೆ ಸುಳ್ಳು ದೂರು ನೀಡಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ.ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸುಳ್ಳು ದೂರು ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿಯ ಪೊಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಲಾಗುತ್ತಿದ್ದು, ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಸುಳ್ಳು ದೂರು ನೀಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸದಿದ್ದರೆ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳು ಪುತ್ತೂರು ನಗರದ ಸಭಾಭವನವೊಂದರಲ್ಲಿ ಗುರುವಾರ ಸಭೆ ನಡೆಸಿದರು.