ನೆಲ್ಯಾಡಿ: ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರದ 2ನೇ ದಿನವಾದ ಅ.23ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ಘಟಕದ ಎಲ್ಲಾ ಸ್ವಯಂ ಸೇವಕರು, ವಲಯದ ಮೇಲ್ವಿಚಾರಕರು ಹಾಗೆಯೇ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದು ಕೆಲಸದಲ್ಲಿ ಭಾಗವಹಿದರು.
ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆಯನ್ನು ನಡೆಸಿದ್ದು, ಈ ಸಭೆಯಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಜನಜಾಗೃತಿ, ಮೇಲ್ವಿಚಾರಕ ನಿತೇಶ್, ನೆಲ್ಯಾಡಿ ವಲಯದ ಜನಜಾಗೃತಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಜನಜಾಗೃತಿ ಸದಸ್ಯ ತುಕಾರಾಮ.ರೈ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್, ವಲಯ ಮೇಲ್ವಿಚಾರಕ ಆನಂದ.ಡಿ, ಬಿ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ಘಟಕ ಸಂಯೋಜಕಿ ನಮಿತಾ ಶೆಟ್ಟಿ, ವಿಪತ್ತು ನಿರ್ವಹಣಾ ಘಟಕದ ಎಲ್ಲಾ ಸ್ವಯಂ ಸೇವಕರು ಉಪಸ್ಥಿತರಿದ್ದರು.