ನೆಲ್ಯಾಡಿ: ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸೆ.2ರಂದು ಬಜತ್ತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ನೆಕ್ಕರಾಜೆ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳ ಪ್ರತಿಭೆಯನ್ನು ಹೊರ ಸೂಸುವ ಉತ್ತಮ ಕಾರ್ಯಕ್ರಮವಾಗಿದೆ. ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳೂ ಪಾಲ್ಗೊಳ್ಳುವಂತಾಗಬೇಕೆಂದು ಹೇಳಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಗೋಪಾಲ ಗೌಡ ದಡ್ಡು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ವೇಗಸ್, ವಸಂತ ಗೌಡ ಪಿಜಕ್ಕಳ, ದಯಾನಂದ ಗೌಡ ಆರಾಲು, ಹಮೀದ್, ನಿವೃತ್ತ ಶಿಕ್ಷಕಿ ಯಶೋಧ, ಬಜತ್ತೂರು ಗ್ರಾ.ಪಂ.ಸದಸ್ಯ ಉಮೇಶ್ ಓಡ್ರಪಾಲ್ ಶುಭಹಾರೈಸಿದರು.
ಸಿ ಆರ್ ಪಿ ಮಂಜುನಾಥ ಕೆ.ವಿ.ಸ್ವಾಗತಿಸಿದರು. ಬಜತ್ತೂರು ಶಾಲಾ ಸಹಶಿಕ್ಷಕಿ ವೀಣಾಕುಮಾರಿ ವಂದಿಸಿದರು. ಸಹ ಶಿಕ್ಷಕ ಮೋಹನಚಂದ್ರ ಪಿ.ಎನ್.ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಬಹುಮಾನ ವಿತರಣೆ:
ಸಂಜೆ ನಡೆದ ಸಮರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಹಿರಿಯ ವಿಭಾಗದಲ್ಲಿ ಬಜತ್ತೂರು ಸರಕಾರಿ ಹಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿ ಹಾಗೂ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು. ಕಿರಿಯ ವಿಭಾಗದಲ್ಲಿ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆ ಸಮಗ್ರ ಪ್ರಶಸ್ತಿಯನ್ನು ಹಾಗೂ ಬಜತ್ತೂರು ಸರಕಾರಿ ಹಿ.ಪ್ರಾ.ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಬಜತ್ತೂರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ದಡ್ಡು ಹಾಗೂ ಸಿ ಆರ್ ಪಿ ಮಂಜುನಾಥ ಕೆ.ವಿ.ಬಹುಮಾನ ವಿತರಿಸಿದರು.