ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಥ್ರೋಬಾಲ್ ಪಂದ್ಯಾಟವು ಗೋಳಿತ್ತಟ್ಟು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಶಾಂತಿನಗರ ಗೋಳಿತ್ತಟ್ಟುನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೋಳಿತ್ತೊಟ್ಟು ಗ್ರಾ.ಪಂ.ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯವಾಗಿದ್ದು ಗ್ರಾಮೀಣ ಪ್ರದೇಶದ ಈ ಸರ್ಕಾರಿ ಶಾಲೆಯಲ್ಲಿ ಈ ಊರಿನ ಕ್ರೀಡಾಭಿಮಾನಿಗಳು, ಪೋಷಕರು ಹಾಗೂ ಶಿಕ್ಷಕರು ಈ ಕ್ರೀಡೆಯ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂಬುದಾಗಿ ನುಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಂ.ಸದಸ್ಯರಾದ ಬಾಲಕೃಷ್ಣ ಅಲೆಕ್ಕಿ, ಹೇಮಲತಾ ಮುರಿಯೇಲು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುನಾಥ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನಾಯ್ಕ್, ಆದರ್ಶ ಯುವಕ ಮಂಡಲದ ಅಧ್ಯಕ್ಷ ತೇಜಸ್ ಶಾಂತಿನಗರ, ವಲಯದ ಕ್ರೀಡಾ ನೋಡೆಲ್ ಅಧಿಕಾರಿಗಳಾದ ಕುಶಾಲಪ್ಪ ಪಡುಬೆಟ್ಟು ಹಾಗೂ ಗಂಗಾಧರ ಉಪ್ಪಿನಂಗಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು ವಹಿಸಿದ್ದರು. ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ ಪ್ರಾಸ್ತಾವಿಕ ಮಾತುಗಳೊಂದಿಗೆ ಸರ್ವರನ್ನೂ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕುಶಾಲಪ್ಪ ನಾಯ್ಕ್ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭ:
ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 11 ತಂಡಗಳು ಮತ್ತು ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಮೂಡಿಬಂತು.ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆ ಉಪ್ಪಿನಂಗಡಿ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಬಂಡಾಡಿ ಪಡೆದುಕೊಂಡಿತು.
ಬಹುಮಾನ ವಿತರಣಾ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ನಾರಾಯಣ ಪೂಜಾರಿ ಡೆಂಬಲೆ, ಮೋನಪ್ಪ ಪೂಜಾರಿ ಡೆಂಬಳೆ, ರಮೇಶ್ ಪೆರ್ಲ, ಅಣ್ಣು ಗೌಡ ಕುವೆತ್ತಿಮಾರು, ರಾಘವೇಂದ್ರ ಮುರಿಯೇಲು, ಹರೀಶ್ ಡೆಂಬಳೆ, ಅಬೂಬಕ್ಕರ್ ನೂಜೋಳು, ಉಪಸ್ಥಿತರಿದ್ದರು.