ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ಎನ್ ಧನುಷ್ ಇವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧಿನಗರದಲ್ಲಿ ಸೆ.17ರಿಂದ 23ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಇವರು ಮಿತ್ತಬಾಗಿಲು ಗ್ರಾಮದ ಕೋಡಿಮನೆ ಸೇವಂತಿ ಮತ್ತು ನಾರಾಯಣ ಗೌಡ ದಂಪತಿಗಳ ಪುತ್ರ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಮಯದಲ್ಲಿ 15 ನಿಮಿಷ ಕಡಿತ ಮಾಡಲಾಗಿದೆ.
ಹೊಸ ನಿಯಮ ಅನುಷ್ಠಾನದ ಬಗ್ಗೆ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಮೂರು ಗಂಟೆಗಳ ಕಾಲ ನಡೆಯುತ್ತಿದ್ದ ಲಿಖಿತ ಪರೀಕ್ಷೆ ಇನ್ನು ಮುಂದೆ 2 ಗಂಟೆ 45 ನಿಮಿಷಗಳ ಕಾಲ ನಡೆಯಲಿದೆ.
ಇದೇ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು 2.45 ಗಂಟೆಯಲ್ಲಿ ಉತ್ತರ ಬರೆಯಬೇಕಾಗಿದೆ.
ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಯಲ್ಲಿ ಮೂರು ಗಂಟೆ ಕಳೆಯಬೇಕಿದೆ. ಯಾಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬಳಿಕ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ.
ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.