ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ-ಶೇ.10 ಡಿವಿಡೆಂಡ್ ಘೋಷಣೆ

ಶೇರ್ ಮಾಡಿ

479.69 ಕೋಟಿ ರೂ.ವ್ಯವಹಾರ; 1.54 ಕೋಟಿ ರೂ.ನಿವ್ವಳ ಲಾಭ

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ವರ್ಷದ 65ನೇ ವಾರ್ಷಿಕ ಮಹಾಸಭೆ ಸೆ.12ರಂದು ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಯಸ್.ಉಮೇಶ್ ಶೆಟ್ಟಿ ಪಟ್ಟೆ ಅವರು ಮಾತನಾಡಿ, ಕಳೆದ 64 ವರ್ಷಗಳಿಂದ ಸಂಘವು ವರ್ಷದಿಂದ ವರ್ಷಕ್ಕೆ ಪ್ರಗತಿಯನ್ನು ಕಾಣುತ್ತಿದೆ. ಸದಸ್ಯರ ಆರ್ಥಿಕ ಅವಶ್ಯಕತೆಯನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೇಂದ್ರ ಕಚೇರಿ ಮತ್ತು ಗೋಳಿತ್ತೊಟ್ಟು ಶಾಖೆಯೂ ಸ್ವಂತ ಕಟ್ಟಡವನ್ನು ಹೊಂದಿದ್ದು ಶಿರಾಡಿ ಶಾಖೆಗೂ ಸ್ವಂತ ನಿವೇಶನ ಖರೀದಿಸಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು ಅ.7ರಂದು ಉದ್ಘಾಟಿಸಲಾಗುವುದು. ಸಂಘದ ವ್ಯವಹಾರವನ್ನು ಗಮನಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸತತ 5ವರ್ಷಗಳಿಂದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಸ್ತುತ ವರ್ಷ ಸಂಘವು ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿದ್ದು ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್‌ನಿAದ ವಿಶೇಷ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈ ಅವರು ವರದಿ ಮಂಡಿಸಿ, 2023-24ನೇ ಸಾಲಿನಲ್ಲಿ ಸಂಘವು ಒಟ್ಟು 479,69,97,518 ರೂ. ವ್ಯವಹಾರ ಮಾಡಿದ್ದು 1,54,98,888.16 ರೂ.ನಿವ್ವಳ ಲಾಭಗಳಿಸಿದೆ. ವರ್ಷದ ಕೊನೆಗೆ 6259 ಸದಸ್ಯರಿದ್ದು 8,73,30,150 ಪಾಲುಬಂಡವಾಳ, 29,82,48,296 ಠೇವಣಾತಿ ಹೊಂದಿದೆ. ಮುಂದಿನ ವರ್ಷಕ್ಕೆ ಪಾಲು ಬಂಡವಾಳವನ್ನು ರೂ.900 ಲಕ್ಷಕ್ಕೆ ಹಾಗೂ ಠೇವಣಿಯನ್ನು 3,000 ಲಕ್ಷಕ್ಕೆ ಹಾಗೂ ಹೊರಬಾಕಿ ಸಾಲವನ್ನು ರೂ.8,500ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಶೇ.10 ಡಿವಿಡೆಂಡ್:
ಶಿರಾಡಿಯಲ್ಲಿ 1.52 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಆಗಿದೆ. ಆದ್ದರಿಂದ ಈ ವರ್ಷ 1.54 ಕೋಟಿ ರೂ.ಲಾಭಾಂಶದಲ್ಲಿ ಡಿವಿಡೆಂಡ್ ಶೇ.10ರಷ್ಟು ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದರು.

ಗೋಳಿತ್ತೊಟ್ಟು ಶಾಖೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿನ ಕಚೇರಿಗೆ ಎಸಿ ಅಳವಡಿಸಬೇಕು. ಎಟಿಎಂ ಸೇರಿದಂತೆ ಹೆಚ್ಚಿನ ಸೌಲಭ್ಯ ನೀಡಬೇಕೆಂಕು, ರಾಸಾಯನಿಕ ಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಸಹಕಾರ ಸಂಘದಲ್ಲಿ ಇರುವ ಕೃಷಿ ಸಾಲದ ಮಿತಿಯನ್ನು ರೂ.5 ಲಕ್ಷಕ್ಕೆ ಏರಿಸಬೇಕು. ಸಂಘದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ಸೇವಾ ಅವಧಿಯಲ್ಲಿ ಮೃತಪಟ್ಟಲ್ಲಿ ಅವರ ಕುಟುಂಬದ ಸದಸ್ಯರಿಗೆ ಅನುಕುಂಪ ಆಧಾರದಲ್ಲಿ ಉದ್ಯೋಗ ನೀಡಬೇಕು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೆಲ್ಯಾಡಿಯಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಬೇಕು. ಕೇಂದ್ರ ಕಚೇರಿಗೆ ಲಿಫ್ಟ್ ಅಳವಡಿಸಬೇಕು ಹಾಗೂ ಕೌಕ್ರಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಂತ ಕಟ್ಟಡಕ್ಕೆ ನಿವೇಶನ ಖರೀದಿಗೆ ಪ್ರಯತ್ನಿಸಬೇಕು ಸಂಘದ ಸದಸ್ಯರು ಹೇಳಿದರು.

ವಿದ್ಯಾರ್ಥಿಗಳಿಗೆ ಗೌರವಾರ್ಪಣೆ:
ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಸ್ಮರಣಿಕೆ ಹಾಗೂ ನಗದು ನೀಡಿ ಗೌರವಾರ್ಪಣೆ ಮಾಡಲಾಯಿತು.

ಎಟಿಎಂ ಉದ್ಘಾಟನೆ:
ಹೊಸದಾಗಿ ಆರಂಭಿಸಿದ ಮಿನಿ ಎಟಿಎಂನ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ಅವರು ನೆರವೇರಿಸಿದರು.

ಆಮಂತ್ರಣ ಪತ್ರ ಬಿಡುಗಡೆ:
ಶಿರಾಡಿಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಾಣಗೊಂಡಿರುವ ‘ಕಲ್ಪತರು ಸಹಕಾರಿ ಸೌಧ’ ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಸಂಘದ ನಿರ್ದೇಶಕರಾದ ಬಾಲಕೃಷ್ಣ ಬಾಣಜಾಲು, ಸರ್ವೋತ್ತಮ ಗೌಡ, ಪ್ರಶಾಂತ ರೈ ಅರಂತಬೈಲು, ಜಯಾನಂದ ಬಂಟ್ರಿಯಾಲ್, ಸುದರ್ಶನ್ ಶಿರಾಡಿ, ಉಷಾ ಅಂಚನ್, ಸುಲೋಚನಾ ಡಿ., ಅಣ್ಣು ಬಿ., ಸುಮಿತ್ರಾ, ಗುರುರಾಜ ಭಟ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಲಯ ಮೇಲ್ವಿಚಾರಕ ವಸಂತ ಯಸ್.ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕಿ ಸುಲೋಚನಾ ಡಿ. ಪ್ರಾರ್ಥಿಸಿದರು. ಸಂಘದ ಅಧ್ಯಕ್ಷ ಯಸ್.ಉಮೇಶ್ ಶೆಟ್ಟಿ ಸ್ವಾಗತಿಸಿದರು. ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಬಾಲಕೃಷ್ಣ ಬಾಣಜಾಲು ವಂದಿಸಿದರು.

Leave a Reply

error: Content is protected !!