ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಅ.4ರಂದು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ನಡೆಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ದಿನೇಶ ಪಿ.ಟಿ ವಹಿಸಿದ್ದರು. ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್.ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗಿರದೆ ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ.ಬಿ.ಟಿ, ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ ಅಶ್ವಿನಿ ಮತ್ತು ಶಿವಪ್ರಸಾದ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ದಿಶಾಂತ್, ಉಪಾಧ್ಯಕ್ಷೆ ಕಲ್ಪನಾ.ವೈ, ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಶಿವಪ್ರಸಾದ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಮ್ಮಾರ ಲೀಲಾವತಿ ಗುತ್ತಿಗಾರು ಅವರನ್ನು ಸನ್ಮಾನಿಸಲಾಯಿತು. ಸಂಜನಾ ಮತ್ತು ಸಂಖ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಡಾ.ಪ್ರಸಾದ.ಎನ್ ಸ್ವಾಗತಿಸಿದರು, ದಿಶಾಂತ್ ವಂದಿಸಿದರು.

Leave a Reply

error: Content is protected !!