ನೆಲ್ಯಾಡಿ ಎನ್ ಎಸ್ ಎಸ್ ನಿಂದ ಕೊಕ್ಕಡ ಗ್ರಾಮ ಸ್ವಚ್ಛತಾ ಜಾಗೃತಿ

ಶೇರ್ ಮಾಡಿ

ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ದಲ್ಲಿ ಕೊಕ್ಕಡ ಗ್ರಾಮ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಎನ್ಎಸ್ಎಸ್ ಘಟಕದ ಶಿಬಿರಾರ್ಥಿಗಳು ಕೊಕ್ಕಡ ಪೇಟೆಯಲ್ಲಿ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯಗಳನ್ನು ಹೆಕ್ಕುವ ಮೂಲಕ ಸ್ವಚ್ಛಗೊಳಿಸಿದರು ಮತ್ತು ಸ್ವಚ್ಛತಾ ಜಾಗೃತಿಯನ್ನು ಮೂಡಿಸಿದರು. ಕೊಕ್ಕಡ ಗ್ರಾಮ ಪಂಚಾಯತಿನ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕೊಕ್ಕಡ ಗ್ರಾಮದ ಸ್ವಚ್ಛತಾ ರಾಯಭಾರಿ ಜೋಸೆಫ್ ಪೀರೇರ ಸ್ವಚ್ಛತಾ ಅಭಿಯಾನದ ಮಾಹಿತಿಯನ್ನು ನೀಡಿದರು.

ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದ ಶಿಬಿರಾಧಿಕಾರಿ ವಿಶ್ವನಾಥ ಶೆಟ್ಟಿ.ಕೆ ಅವರು ಶಿಬಿರಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಭೇಟಿ ನೀಡಿದ ಕರ್ನಾಟಕ ಸರಕಾರ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಸವಿತಾ ಯೆರ್ಮಲ್ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಹೆಚ್ಚಿಸುತ್ತದೆ ಹೆಣ್ಣು ಬ್ರೂಣ ಹತ್ಯೆಯನ್ನು ತಡೆಯುವ ಮತ್ತು ಲಿಂಗ ಸಮಾನತೆಯ ಬಗ್ಗೆ ಎನ್ ಎಸ್ ಎಸ್ ನ ಸ್ವಯಂಸೇವಕರು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದ ಅವರು ಶಿಬಿರಾರ್ಥಿಗಳ ಸ್ವಚ್ಛತಾ ಕಾರ್ಯವನ್ನು ಶ್ಲಾಘಿಸಿದರು.

ಕೊಕ್ಕಡ ಆರೋಗ್ಯ ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ.ತುಷಾರ, ಪಂಚಾಯತಿ ಅಧ್ಯಕ್ಷೆ ಬೇಬಿ, ನಿವೃತ್ತ ಮುಖ್ಯಶಿಕ್ಷಕಿ ಜೆಸಿಂತಾ, ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ, ಸರಕಾರಿ ಪ್ರೌಢಶಾಲೆ ಕೊಕ್ಕಡ ಇದರ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!