ಬೆಳಾಲಿನಲ್ಲಿ 1867ನೇ ಮದ್ಯವರ್ಜನ ಶಿಬಿರದ ಸಮಾರೋಪ

ಶೇರ್ ಮಾಡಿ

ಉಜಿರೆ : ಬೆಳಾಲು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳಾಲು ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇದರ ಮಾರ್ಗದರ್ಶನದಲ್ಲಿ ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಉಜಿರೆ, ನವಜೀವನ ಸಮಿತಿಗಳು ಇವರ ಸಹಕಾರದೊಂದಿಗೆ, ಬೆಳಾಲು ನವಜೀವನ ಸಮಿತಿ ಸದಸ್ಯರ 25ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಬೆಳಾಲು ಶ್ರೀ ಧ. ಮ.ಪ್ರೌಢ ಶಾಲೆಯಲ್ಲಿ ಅ.4ರಿಂದ ಒಂದು ವಾರ ನಡೆದ 1867ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಅ.11ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್ ಮಾತನಾಡಿ ಪ್ರತಿಯೊಬ್ಬರಲ್ಲಿಯು ಉತ್ತಮ ಹಾಗೂ ಕೆಟ್ಟ ಗುಣ ಇರುತ್ತದೆ. ಪ್ರಯತ್ನ ಪಟ್ಟರೆ ಉತ್ತಮ ನಾಗರೀಕನಾಗಿ ಸಮಾಜದಲ್ಲಿ ಜೀವನ ನಡೆಸಲು ಸಾಧ್ಯ. ಇಂತಹ ಶಿಬಿರ ಹಲವಾರು ಮಹನೀಯರ ಪ್ರಯತ್ನದಿಂದ ಒಂದು ವಾರದ ನಡೆದಿದೆ. ಇದನ್ನು ಸಾಧ್ಯ ಮಾಡುವ ಮೂಲಕ ಪರಿವರ್ತನೆ ಶಿಬಿರಾರ್ಥಿಗಳಾಗಿ ಬಂದವರಲ್ಲಿ ಸಾಧ್ಯ. ಗಟ್ಟಿ ಮನಸ್ಸು ಮಾಡಿ ಯಾವುದೇ ಅಮಲು ಪದಾರ್ಥ ಸೇವನೆಯಿಂದ ದೂರ ಇದ್ದು ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿ ಬೆಳಾಲಿನಲ್ಲಿ ನಡೆದ ಈ ಶಿಬಿರ ವಿಶೇಷವಾಗಿದ್ದು 25 ವರ್ಷದಿಂದ ಮದ್ಯಪಾನ ಬಿಟ್ಟು ನೆಮ್ಮದಿ ಜೀವನ ನಡೆಸುತ್ತಿರುವ ನವಜೀವನ ಸದಸ್ಯರ ಕಾರ್ಯ ಮೆಚ್ಚುಗೆ ಪಡೆದಿದೆ ಅವರನ್ನು ಗುರುತಿಸುವ ಕೆಲಸ ಮಾಡಿ ಮಾದರಿ ಕಾರ್ಯಕ್ರಮ ಮಾಡಿದ ಶಿಬಿರದ ವ್ಯವಸ್ಥಾಪಾನ ಸಮಿತಿಗೆ ಜಿಲ್ಲಾ ಸಮಿತಿಯಿಂದ ಅಭಿನಂದನೆಗಳು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಸಂಕಲ್ಪದಂತೆ ಅಮಲು ಪದಾರ್ಥದಿಂದ ದೂರವಾಗಿ ನೆಮ್ಮದಿ ಜೀವನ ನಡೆಸಿದರೆ ಇಲ್ಲಿ ದುಡಿದ ಎಲ್ಲರ ಶ್ರಮಕ್ಕೆ ಸಿಕ್ಕಿದ ಪ್ರತಿಫಲವಾಗಿತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮದ್ಯವರ್ಜನ ಶಿಬಿರದ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ ಮಾತನಾಡಿ ಈ ಶಿಬಿರದ ಸಾರ್ಥಕತೆ ಶಿಬಿರಾರ್ಥಿಗಳಾಗಿ ಬಂದ 74 ಮಂದಿಯೂ ತಮ್ಮ ಮುಂದಿನ ದಿನಗಳಲ್ಲಿ ಎಲ್ಲಾ ದುಶ್ಚಟಗಳನ್ನು ಬಿಟ್ಟು ಕುಟುಂಬದಲ್ಲಿ ಮನೆಯ ಬೆಳಕಾಗಿ ಬಾಳಿದರೆ ಇದರಲ್ಲಿ ಶ್ರಮಿಸಿದವರಿಗೆ ನೀಡುವ ಕೊಡುಗೆ ಇದರಿಂದ ನಮಗೆ ಸಂತೋಷವಾಗುತ್ತದೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಿಸ್,ಪ್ರಗತಿ ಬಂಧು ತಾಲೂಕು ಒಕ್ಕೂಟದ ಅಧ್ಯಕ್ಷ ಸೀತಾರಾಮ, ಧರ್ಮಸ್ಥಳ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸಂತೋಷ, ನವಜೀವನ ಸಮಿತಿ ಗ್ರಾಮ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ, ಶಿಬಿರ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ತಾ.ಪಂ.ಮಾಜಿ ಅಧ್ಯಕ್ಷ ಎನ್.ಜತ್ತನ್ನ ಗೌಡ, ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷೆ ಶಾರದಾ ರೈ, ಮಾಜಿ ಅಧ್ಯಕ್ಷ ಪಿ.ತಿಮ್ಮಪ್ಪ ಗೌಡ ಬೆಳಾಲು, ಉಜಿರೆ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ನಿವೃತ್ತ ಶಿಕ್ಷಕ ರಾಮಕೃಷ್ಣ ಭಟ್, ಉಜಿರೆ ರತ್ನಮಾನಸದ ನಿಲಯ ಮೇಲ್ವಿಚಾರಕ ಯತೀಶ್ ಬಳಂಜ, ಯೋಜನೆಯ ತಾಲೂಕು ಯೋಜನಾಧಿಕಾರಿ ಸುರೇಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಧುರ ಸ್ವಾಗತಿಸಿದರು. ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಯೋಜನೆಯ ಬೆಳ್ತಂಗಡಿ ವಲಯದ ಮೇಲ್ವಿಚಾರಕ ಚಿತ್ತರಂಜನ್ ವಂದಿಸಿದರು.

ಉಜಿರೆ ವಲಯ ಮೇಲ್ವಿಚಾರಕಿ ವನಿತಾ, ವಲಯದ ಸೇವಾ ಪ್ರತಿನಿಧಿಗಳು, ಜನಜಾಗೃತಿ ವೇದಿಕೆ, ನವಜೀವನ ಸಮಿತಿಯ ಪದಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು. ಶಿಬಿರಾರ್ಥಿ ಶಿವಣ್ಣ ಕಲ್ಮ0ಜ ಅನಿಸಿಕೆ ವ್ಯಕ್ತ ಪಡಿಸಿದರು.

ಸನ್ಮಾನ:
ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಗ್ರಾ.ಪಂ.ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ದಂಪತಿಯನ್ನು ಕಳೆದ 25 ವರ್ಷದಿಂದ ಮದ್ಯಪಾನ ಬಿಟ್ಟು ನೆಮ್ಮದಿ ಜೀವನ ನಡೆಸುತ್ತಿರುವ ಬೆಳಾಲು ನವಜೀವನ ಸಮಿತಿ ಸಮಿತಿ ಸದಸ್ಯರನ್ನು, ಮದ್ಯವರ್ಜನ ಶಿಬಿರಕ್ಕೆ ಸಹಕಾರ ನೀಡಿದ ಶೌರ್ಯ ತಂಡದ ಸದಸ್ಯರನ್ನು, ಸಮಿತಿಯ ಸ್ವಯಂ ಸೇವಕರನ್ನು, ಶಿಬಿರಾಧಿಕಾರಿ ದೇವಿಪ್ರಸಾದ್, ಆರೋಗ್ಯ ಸಹಾಯಕಿ ಪ್ರೆಸಿಲ್ಲಾ, ಜನ ಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರನ್ನು ಗೌರವಿಸಲಾಯಿತು.

Leave a Reply

error: Content is protected !!