ನೇಸರ ಫೆ.27: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ,ಗ್ರಾಮ ಪಂಚಾಯತ್ ನೆಲ್ಯಾಡಿ ಮತ್ತು ಜೇಸಿಐ ಘಟಕ ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ.27ರ ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ನೆಲ್ಯಾಡಿಯಲ್ಲಿ ಆಯೋಜಿಸಲಾಯಿತು.
ಜೇಸಿಐ ನೆಲ್ಯಾಡಿ ಘಟಕದ ಅಧ್ಯಕ್ಷರಾದ ಜೇಸಿ.ಜಯಂತಿ,ಬಿ.ಎಂ.ಉದ್ಘಾಟಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಈ ಪಲ್ಸ್ ಪೊಲೀಯೊ ಕಾರ್ಯಕ್ರಮ ಎರಡು ಹಂತದ್ದಾಗಿದ್ದು.ಇದನ್ನು ಡಿಸೆಂಬರ್ ಮತ್ತು ಫೆಬ್ರವರಿ ತಿಂಗಳಲ್ಲಿ ಹಾಕಲಾಗುತ್ತದೆ.ರಾಷ್ಟ್ರೀಯ ಆರೋಗ್ಯ ಅನ್ವಯ ಪಲ್ಸ್ ಪೊಲೀಯೊ ಕಾರ್ಯಕ್ರಮ ಭಾನುವಾರ ದೇಶದಾದ್ಯಂತ ಜಾರಿಗೊಂಡಿತು.ಐದು ವರ್ಷ ವಯೋಮಿತಿ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸಿಕೊಳ್ಳ ಬೇಕು,ಇವತ್ತಿನಿಂದ ಮಾರ್ಚ್ 2 ರವರೆಗೆ ನಡೆಯುವ ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಜೇಸಿ.HGF.ಶಿವಪ್ರಸಾದ್ ನೆಲ್ಯಾಡಿ ಉಪಸ್ಥಿತರಿದ್ದರು.
ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಫಲಾನುಭವಿ ಮಕ್ಕಳೂ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
—ಜಾಹೀರಾತು—